TVS: ಬಡವರ ಬಂಡಿಯಿದು.. 76,000ಕ್ಕೆ ಸಿಗುತ್ತೆ.. 100 ರೂಪಾಯಿ ಪೆಟ್ರೋಲ್ ಹಾಕಿಸಿದ್ರೆ 50 Km ಮೈಲೇಜ್!

ಟಿವಿಎಸ್ ಜುಪಿಟರ್ 110 (TVS Jupiter 110) ಪ್ರಮುಖ ಸ್ಕೂಟರ್ ಎಂದೇ ಹೆಸರುವಾಗಿದೆ. ಇದು ದಿನಬಳಕೆಗೆಗೂ ಹೆಚ್ಚು ಸೂಕ್ತವಾಗಿದ್ದು, ಭಾರೀ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಜುಪಿಟರ್ 110' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ನೂತನ ಸ್ಕೂಟರ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಹೊಸ 'ಟಿವಿಎಸ್ ಜುಪಿಟರ್ 110' ಸ್ಕೂಟರ್, ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಕನಿಷ್ಠ ರೂ.76.150 ಹಾಗೂ ಗರಿಷ್ಠ ರೂ.88,350 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್ (Dram), ಡ್ರಮ್ ಅಲಾಯ್ (Dram Alloy), ಡ್ರಮ್ ಎಸ್ಎಕ್ಸ್‌ಸಿ (Dram SXC), ಡಿಸ್ಕ್ ಎಸ್ಎಕ್ಸ್‌ಸಿ (Disc SXC) ಹಾಗೂ ಸ್ಪೆಷಲ್ ಎಡಿಷನ್ (Special Edition) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

TVS Jupiter 110 Scooter Price Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಇದು ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್, ಮೆಟಿಯರ್ ರೆಡ್ ಗ್ಲಾಸ್, ಸ್ಟಾರ್‌ಲೈಟ್ ಬ್ಲೂ ಗ್ಲಾಸ್, ಸ್ಟಾರ್‌ಡಸ್ಟ್ ಬ್ಲ್ಯಾಕ್, ಟೈಟಾನಿಯಂ ಗ್ರೇ ಮ್ಯಾಟ್ ಹಾಗೂ ಟ್ವಿಲೈಟ್ ಪರ್ಪಲ್ ಗ್ಲಾಸ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಸುತ್ತಳತೆ (Dimension):

ಈ ಸ್ಕೂಟರ್ ಹೆಚ್ಚು ವಿಶಾಲವಾಗಿದೆ. 1,848 ಮಿ.ಮೀ ಉದ್ದ, 665 ಮಿ.ಮೀ ಅಗಲ ಹಾಗೂ 1,158 ಮಿ.ಮೀ ಎತ್ತರವಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,275 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 105 ಕೆಜಿ ತೂಕವಿದೆ.

TVS Jupiter 110 Scooter Price Design Colours Engine Mileage Features And All Details

ಕಾರ್ಯಕ್ಷಮತೆ (Performance):

ನೂತನ 'ಟಿವಿಎಸ್ ಜುಪಿಟರ್ 110' ಸ್ಕೂಟರ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 113-ಸಿಸಿ ಸಿಂಗಲ್-ಸಿಲಿಂಡರ್ 4-ಸ್ಟ್ರೋಕ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6,500 ಆರ್‌ಪಿಎಂನಲ್ಲಿ 8.02 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 5,000 ಆರ್‌ಪಿಎಂನಲ್ಲಿ 9.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮೈಲೇಜ್ (Mileage):

ಇದು ಉತ್ತಮ ಇಂಧನ ದಕ್ಷತೆಯಿಂದಲೂ ಮನೆ ಮಾತಾಗಿದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ, ಸರಿ ಸುಮಾರು 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5.1 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 250 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

TVS Jupiter 110 Scooter Price Design Colours Engine Mileage Features And All Details

ವೈಶಿಷ್ಟ್ಯಗಳು (Features):

ಈ ಸ್ಕೂಟರ್ ಪುಲ್-ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್‌, ಬ್ಲೂಟೂತ್ ಕನೆಕ್ಟಿವಿಟಿ, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಂಜಿನ್ ಕಿಲ್ ಸ್ವಿಚ್ ಹಾಗೂ ಐಗೋ ಅಸಿಸ್ಟ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 8.29 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 790 ಮಿ.ಮೀ ಇದೆ.

ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಹೊಸ 'ಟಿವಿಎಸ್ ಜುಪಿಟರ್ 110' ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ ಟೆಲಿಸ್ಕೋಪಿಕ್ ಹೈಡ್ರಾಲಿಕ್ ಹಾಗೂ ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಟ್ವಿನ್-ಟ್ಯೂಬ್ ಎಮಲ್ಷನ್ ಟೈಪ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Sunday, January 18, 2026, 9:25 [IST]
English summary
Tvs jupiter 110 scooter price design colours engine mileage features and all details
Read more on tvs motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+