ಬಡವರ ಸ್ಕೂಟರ್‌ಗಳಿವು.. 53 ಕಿ.ಮೀ ವರೆಗೆ ಮೈಲೇಜ್.. ರೂ.72,000 ರಿಂದ ಶುರು.. ಯಾವುದು ಬೆಸ್ಟ್?

ಟಿವಿಎಸ್ ಜುಪಿಟರ್ 110 (TVS Jupiter 110) ನಂಬಿಕಾರ್ಹ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಹೀರೋ ಜೂಮ್ 110 (Hero Xoom 110) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಸ್ಕೂಟರ್‌ಗಳು ಒಂದಕ್ಕಿಂತ ಒಂದು ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ನಾವಿಲ್ಲಿ ಈ ಸ್ಕೂಟರ್‌ಗಳ ಬೆಲೆ, ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳ ಕುರಿತು ಹೋಲಿಕೆ ಮಾಡಿದ್ದೇವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಬೆಲೆ (Price):

ಇವೆರೆಡು ಸ್ಕೂಟರ್‌ಗಳು ಅಗ್ಗದ ದರದಲ್ಲೂ ಗ್ರಾಹಕರ ಖರೀದಿಗೆ ಲಭ್ಯವಿವೆ. 'ಜುಪಿಟರ್ 110' ರೂ.77,000 ರಿಂದ ರೂ. 89,600 ಬೆಲೆಯನ್ನು ಹೊಂದಿದೆ. ಅದೇ ರೀತಿಯಲ್ಲಿ 'ಜೂಮ್ 110' ರೂ.72,701 ರಿಂದ ರೂ.78,786 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬೆಲೆಯ ವಿಚಾರದಲ್ಲಿ 'ಜುಪಿಟರ್ 110'ಗೆ ಹೋಲಿಕೆ ಮಾಡಿದರೆ, 'ಜೂಮ್ 110' ತುಸು ಕಡಿಮೆ ದರವನ್ನು ಪಡೆದಿದೆ.

Tvs Jupiter 110 vs Hero Xoom 110 Which Scooter Best Comparison

ವಿನ್ಯಾಸ (Design):

ಈ ಸ್ಕೂಟರ್‌ಗಳು ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿವೆ. ಹೊಸ 'ಟಿವಿಎಸ್ ಜುಪಿಟರ್' ಸ್ಕೂಟರ್ ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್ & ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಜೊತೆಗೆ ಉತ್ತಮವಾದ 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಟೈಟಾನಿಯಂ ಗ್ರೇ ಮ್ಯಾಟ್, ಮೆಟಿಯರ್ ರೆಡ್ ಗ್ಲಾಸ್, ಸ್ಟಾರ್‌ಲೈಟ್ ಬ್ಲೂ ಗ್ಲಾಸ್ ಮತ್ತು ಸ್ಟಾರ್‌ಡಸ್ಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1,275 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಹೀರೋ ಜೂಮ್' ಎಲ್ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ. ಪರ್ಲ್ ಸಿಲ್ವರ್ ವೈಟ್, ಸ್ಪೋರ್ಟ್ಸ್ ರೆಡ್, ಮ್ಯಾಟ್ ಅಬ್ರಾಕ್ಸ್ ಆರೆಂಜ್ ಮತ್ತು ಮ್ಯಾಟ್ ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 155 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,300 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ.

Tvs Jupiter 110 vs Hero Xoom 110 Which Scooter Best Comparison

ಕಾರ್ಯಕ್ಷಮತೆ (Performance):

ಇವೆರೆಡು ಕಾರುಗಳು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿವೆ. 'ಜುಪಿಟರ್ 110' ಸ್ಕೂಟರ್ 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5.1 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಪಡೆದಿದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 8.29 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

'ಜೂಮ್ 110' ಸ್ಕೂಟರ್ 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 53 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5.2 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. 87 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 9.35 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ವೈಶಿಷ್ಟ್ಯಗಳು (Features):

ಈ ಸ್ಕೂಟರ್‌ಗಳು ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. 'ಟಿವಿಎಸ್ ಜುಪಿಟರ್' ಪುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್‌, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಂಜಿನ್ ಕಿಲ್ ಸ್ವಿಚ್ & ಬ್ಲೂಟೂತ್ ಕನೆಕ್ಟಿವಿಟಿಯನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಹೈಡ್ರಾಲಿಕ್ & ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಟ್ವಿನ್-ಟ್ಯೂಬ್ ಎಮಲ್ಷನ್ ಟೈಪ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

'ಹೀರೋ ಜೂಮ್' ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಫೋನ್ ಚಾರ್ಜಿಂಗ್ ಪೋರ್ಟ್‌ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಹೈಡ್ರಾಲಿಕ್ ಶಾಕ್ ಅಬ್ಸಾರ್ಬರ್‌ ಮತ್ತು ಹಿಂಭಾಗ (ರೇರ್) ಸಿಂಗಲ್ ಸ್ಪ್ರಿಂಗ್ ಲೋಡೆಡ್ ಹೈಡ್ರಾಲಿಕ್ ಡ್ಯಾಂಪರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Monday, March 9, 2026, 11:25 [IST]
English summary
Tvs jupiter 110 vs hero xoom 110 which scooter best comparison
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+