ಆಫೀಸ್‌ಗೆ ಹೋಗಲು ಬೆಸ್ಟ್ ಸ್ಕೂಟರ್‌ಯಿದು.. ಫುಲ್ ಟ್ಯಾಂಕ್ ಮಾಡಿಸಿದ್ರೆ 250 Km ಮೈಲೇಜ್.. 83,250 ರೂಪಾಯಿ!
ಟಿವಿಎಸ್ ಜೂಪಿಟರ್ 125 (TVS Jupiter 125) ಜನಪ್ರಿಯ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಪ್ರತಿದಿನ ಆಫೀಸ್‌ಗೆ ಹೋಗುವವರಿಗೆ ಬೆಸ್ಟ್ ಚಾಯ್ಸ್ ಆಗಿದೆ. ಪುರುಷ ಹಾಗೂ ಮಹಿಳೆಯರು ಕೂಡ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಜೂಪಿಟರ್'ನ್ನು ಮನೆಗೆ ತರಬಹುದಾಗಿದೆ. ಬನ್ನಿ, ಈ ಸ್ಕೂಟರ್‌ನ ಬೆಲೆ ಹಾಗೂ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಕನಿಷ್ಠ ರೂ.83,250 ಹಾಗೂ ಗರಿಷ್ಠ ರೂ.92,250 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಡ್ರಮ್ (Drum), ಡಿಸ್ಕ್ (Disc), ಡಿಟಿ ಎಸ್ಎಕ್ಸ್‌ಸಿ (DT SXC) ಹಾಗೂ ಸ್ಮಾರ್ಟ್‌ಕನೆಕ್ಟ್ (SmartXonnect) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ಹೊಸ 'ಟಿವಿಎಸ್ ಜೂಪಿಟರ್ 125' ಸ್ಕೂಟರ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಅತ್ಯುತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಹೊಂದಿದೆ. ಇಂಡಿಬ್ಲೂ, ಟೈಟಾನಿಯಂ ಗ್ರೇ, ಪ್ರಿಸ್ಟೈನ್ ವೈಟ್, ಡಾನ್ ಆರೆಂಜ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಎಲೈಟ್ ಗ್ರೀನ್, ಮ್ಯಾಟ್ ಕಾಪರ್, ಐವರಿ ಬ್ರೌನ್ ಹಾಗೂ ಐವರಿ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಸುತ್ತಳತೆ (Dimension):
ಈ ಸ್ಕೂಟರ್ ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 1,852 ಮಿ.ಮೀ ಉದ್ದ, 681 ಮಿ.ಮೀ ಅಗಲ ಮತ್ತು 1,168 ಮಿ.ಮೀ ಎತ್ತರವಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1275 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 108 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 124.8-ಸಿಸಿ ಸಿಂಗಲ್-ಸಿಲಿಂಡರ್ ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6,500 ಆರ್‌ಪಿಎಂನಲ್ಲಿ 8.2 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 4,500 ಆರ್‌ಪಿಎಂನಲ್ಲಿ 10.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.
ಮೈಲೇಜ್ (Mileage):
'ಟಿವಿಎಸ್ ಜೂಪಿಟರ್ 125' ಸ್ಕೂಟರ್ ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5.1 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಒಮ್ಮೆ ಪೂರ್ತಿಯಾಗಿ 250 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):
ಈ ಸ್ಕೂಟರ್ ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಹಾಗೂ ಎಲೆಕ್ಟ್ರಿಕ್ ಸೈಲಂಟ್ ಸ್ಟಾರ್ಟ್‌ನ್ನು ಪಡೆದಿದೆ. 33 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್ ಆಯ್ಕೆಯನ್ನು ಒಳಗೊಂಡಿದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಬರೀ 16.72 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System):
ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಹಾಗೂ ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 12-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ಸ್ಕೂಟರ್‌ಗಳು (Rival Scooters):
ಇದಕ್ಕೆ ಸಾಲು - ಸಾಲು ಎದುರಾಳಿಗಳಿವೆ. ಬಹುಮುಖ್ಯವಾಗಿ ಹೋಂಡಾ ಆಕ್ಟಿವಾ 125 (Honda Activa 125), ಸುಜುಕಿ ಆಕ್ಸೆಸ್ 125 (Suzuki Access 125) ಹಾಗೂ ಹೀರೋ ಡೆಸ್ಟಿನಿ 125 (Hero Destini 125) ಸ್ಕೂಟರ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications