TVS: 80 ಕಿ.ಮೀ ಮೈಲೇಜ್ ನೀಡಬಲ್ಲ ಸ್ಕೂಟರ್ ಬಿಡುಗಡೆಗೆ ಸಿದ್ಧ.. ಹೋಂಡಾ ಆಕ್ಟಿವಾ ಕಥೆ ಮುಗಿತಾ?

ಹೋಂಡಾ ಆಕ್ಟಿವಾ (Honda Aativa) ಜನಮೆಚ್ಚಿದ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಟಿವಿಎಸ್ ಜುಪಿಟರ್ (TVS Jupiter) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಸ್ಕೂಟರ್‌ಗಳು ಜಿದ್ದಿಗೆ ಬಿದ್ದ ರೀತಿಯಲ್ಲಿ ಮಾರಾಟವಾಗುತ್ತಿವೆ. ಸದ್ಯ, ಇದೇ 'ಜುಪಿಟರ್'ನ್ನು ಹೊಸ ರೂಪದಲ್ಲಿ ಪರಿಚಯಿಸಲಾಗುತ್ತದೆ. ಎಲ್ಲವು ಅಂದುಕೊಂಡಂತೆ ಜರುಗಿದರೆ, ಈ ವರ್ಷವೇ 'ಸಿಎನ್‌ಜಿ' ಚಾಲಿತ ಮಾಡೆಲ್ ಸಹ ಬಿಡುಗಡೆಯಾಗಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ನೂತನ ಟಿವಿಎಸ್ ಜುಪಿಟರ್ ಸಿಎನ್‌ಜಿ (TVS Jupiter CNG) ಸ್ಕೂಟರ್, ಇದೇ ವರ್ಷದ ಅಕ್ಟೋಬರ್ ತಿಂಗಳಿಗೂ ಮೊದಲೇ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. ಆದರೆ, ಈ ಬಗ್ಗೆ ಕಂಪನಿಯೂ ಯಾವುದೇ ಗುಟ್ಟನ್ನು ಬಿಟ್ಟುಕೊಟ್ಟಿಲ್ಲ. ಈ ಸ್ಕೂಟರ್ ರೂಪಾಂತರಗಳಿಗೆ ಅನುಗುಣವಾಗಿ ರೂ.90,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ.

Tvs Jupiter Cng Scooter Expected Launch Timeline Price And Mileage Details

ಇದು ದೇಶದ ಮೊಟ್ಟ ಮೊದಲ 'ಸಿಎನ್‌ಜಿ' ಸ್ಕೂಟರ್ ಎಂಬ ಖ್ಯಾತಿಗೂ ಪಾತ್ರವಾಗಿದೆ. 2025ರ ಜನವರಿಯಲ್ಲಿ ನಡೆದ 'ಭಾರತ್ ಮೊಬಿಲಿಟಿ ಗ್ಲೋಬಲ್' ಎಕ್ಸ್‌ಪೋದಲ್ಲೂ ಪ್ರದರ್ಶನಕ್ಕೆ ಇಡಲಾಗಿತ್ತು. ಅಲ್ಲಿ ತೋರಿಸಲಾದ ಮಾಡೆಲ್, ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿತ್ತು. ಈ ಸ್ಕೂಟರ್ ಹೆಚ್ಚು ವಿಶಾಲವಾಗಿರಲಿದೆ. 163 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ & 1,275 ಮೀ.ಮೀ ವೀಲ್‌ಬೇಸ್‌ನ್ನು ಪಡೆದಿರಲಿದೆ ಎನ್ನಲಾಗಿದೆ.

ಈಗಾಗಲೇ 'ಜುಪಿಟರ್ ಸಿಎನ್‌ಜಿ' ಪವರ್‌ಟ್ರೇನ್‌ ಕುರಿತಂತೆ ಪ್ರತಿಯೊಂದು ವಿವರಗಳು ಬಹಿರಂಗಗೊಂಡಿವೆ. ಈ ಸ್ಕೂಟರ್ 124.8 ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್‌ನ್ನು ಪಡೆದಿದ್ದು, 7.1 ಪಿಎಸ್ ಅಶ್ವ ಶಕ್ತಿ ಹಾಗೂ 9.4 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.4-ಕೆಜಿಯ ಸಿಎನ್‌ಜಿ ಮತ್ತು 2-ಲೀಟರ್‌ನಷ್ಟು ಪೆಟ್ರೋಲ್ ಟ್ಯಾಂಕ್‌ನ್ನು ಒಳಗೊಂಡಿದೆ. ಜೊತೆಗಿದು ಸಿಎನ್‌ಜಿ ಮೋಡ್‌ನಲ್ಲಿ 1 ಕೆಜಿ ಇಂಧನ ದಹಿಸಿ, 84 ಕಿ.ಮೀ ವರೆಗೆ ಮೈಲೇಜ್‌ನ್ನು ಕೊಡಬಲ್ಲದು. ಒಟ್ಟು 226 ಕಿ.ಮೀ ವರೆಗೆ ಓಡಬಲ್ಲದು.

Tvs Jupiter Cng Scooter Expected Launch Timeline Price And Mileage Details

ನೂತನ 'ಜುಪಿಟರ್ ಸಿಎನ್‌ಜಿ' 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜರ್ ಮತ್ತು ಟಿವಿಎಸ್ ಕನೆಕ್ಟ್ ಅಪ್ಲಿಕೇಶನ್‌ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರಿಗೂ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿರುವ ಸಾಧ್ಯತೆಯಿದೆ.

ಸ್ಟ್ಯಾಂಡರ್ಡ್ ಟಿವಿಎಸ್ ಜುಪಿಟರ್ 125 (TVS Jupiter 125) ಹೇಗಿದೆ:

ಈ ಸ್ಕೂಟರ್ ರೂ.83,250 ರಿಂದ ರೂ.92,250 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 16.72 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಹೊಸ ಜುಪಿಟರ್ 125 ಹೆಚ್ಚು ಅತ್ಯಾಧುನಿಕವಾಗಿದೆ. ಇಂಡಿಬ್ಲೂ, ಟೈಟಾನಿಯಂ ಗ್ರೇ, ಪ್ರಿಸ್ಟೈನ್ ವೈಟ್, ಡಾನ್ ಆರೆಂಜ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಎಲೈಟ್ ಗ್ರೀನ್, ಮ್ಯಾಟ್ ಕಾಪರ್ ಮತ್ತು ಐವರಿ ಬ್ರೌನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌‍ಬಿ ಚಾರ್ಜಿಂಗ್ ಸಾಕೆಟ್ & ಎಲೆಕ್ಟ್ರಿಕ್ ಸೈಲಂಟ್ ಸ್ಟಾರ್ಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಿವಿಎಸ್ ಜುಪಿಟರ್ 110 (TVS Jupiter 110) ವಿಶೇಷತೆಗಳೇನು:

ಇದು ರೂ.76.150 ರಿಂದ ರೂ.88,350 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. 3.70 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಸ್ಕೂಟರ್ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಮೆಟಿಯರ್ ರೆಡ್ ಗ್ಲಾಸ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್, ಸ್ಟಾರ್‌ಲೈಟ್ ಬ್ಲೂ ಗ್ಲಾಸ್ ಮತ್ತು & ಟೈಟಾನಿಯಂ ಗ್ರೇ ಮ್ಯಾಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. ಪುಲ್-ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Friday, February 27, 2026, 11:29 [IST]
English summary
Tvs jupiter cng scooter expected launch timeline price and mileage details
Read more on tvs motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+