TVS: 84 Km ಮೈಲೇಜ್.. ಅಗ್ಗದ ಹೊಸ ಸ್ಕೂಟರ್ ಬಿಡುಗಡೆಗೆ ಸಜ್ಜು, ಹೋಂಡಾ ಆಕ್ಟಿವಾಗೆ ಬೈ ಬೈ ಹೇಳೋ ಕಾಲ ಬಂತಾ?
ಹೋಂಡಾ ಆಕ್ಟಿವಾ (Honda Aativa) ನಂ.1 ಸ್ಕೂಟರ್ ಆಗಿದೆ. ಇದಕ್ಕೆ ಟಿವಿಎಸ್ ಜುಪಿಟರ್ (TVS Jupiter) ನೇರವಾದ ಎದುರಾಳಿಯಾಗಿದೆ. ಪ್ರತಿ ತಿಂಗಳು ಉತ್ತಮ ಸಂಖ್ಯೆಯಲ್ಲಿಯೇ ಮಾರಾಟವಾಗುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಇದೇ 'ಜುಪಿಟರ್'ನ್ನು 'ಸಿಎನ್‌ಜಿ' ಪವರ್‌ಟ್ರೇನ್ ಆಯ್ಕೆಯಲ್ಲಿ ಮಾರಾಟಕ್ಕೆ ತರಲು ಕಂಪನಿಯು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಎಲ್ಲವು ಅಂದುಕೊಂಡಂತೆ ನಡೆದರೆ, ಅತಿ ಶೀಘ್ರದಲ್ಲೇ 'ಜುಪಿಟರ್ ಸಿಎನ್‌ಜಿ' ಸ್ಕೂಟರ್ ಬಿಡುಗಡೆಯೂ ಆಗಲಿದೆ.
ಹೊಚ್ಚ ಹೊಸ 'ಟಿವಿಎಸ್ ಜುಪಿಟರ್ ಸಿಎನ್‌ಜಿ' ಸ್ಕೂಟರ್, ಇದೇ ಏಪ್ರಿಲ್ ತಿಂಗಳೊಳಗೆ ಪರಿಚಯಗೊಳ್ಳಬಹುದು. ಆದರೆ, ಈ ಕುರಿತಂತೆ ಕಂಪನಿ ಕಡೆಯಿಂದ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ನೂತನ 'ಜುಪಿಟರ್ ಸಿಎನ್‌ಜಿ' ರೂ.90,000 ರಿಂದ ರೂ.1 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ.

ಈ ಸ್ಕೂಟರ್‌ನ್ನು 2025ರ ಜನವರಿಯಲ್ಲಿ ಮುಕ್ತಾಯಗೊಂಡ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶಿಸಲಾಗಿತ್ತು. ಇದು ವಿಶ್ವದ ಮೊಟ್ಟ ಮೊದಲ ಸಿಎನ್‌ಜಿ ಸ್ಕೂಟರ್ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಎಲ್ಇಡಿ ಹೆಡ್‌ಲ್ಯಾಂಪ್ ಹಾಗೂ ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಪಡೆದಿದೆ.
ನೂತನ 'ಟಿವಿಎಸ್ ಜುಪಿಟರ್ ಸಿಎನ್‌ಜಿ' ಹೆಚ್ಚು ವಿಶಾಲವಾಗಿರಲಿದೆ. ಬಹುತೇಕ 'ಜುಪಿಟರ್ 125'ನಂತೆಯೇ 1,852 ಎಂಎಂ ಉದ್ದ, 681 ಎಂಎಂ ಅಗಲ ಹಾಗೂ 1,168 ಎಂಎಂ ಎತ್ತರವಿರಲಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1275 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿರಲಿದೆ. 106 ಕೆಜಿ ತೂಕವಿರುವ ನಿರೀಕ್ಷೆಯಿದೆ.

ಇದರ ಪವರ್‌ಟ್ರೇನ್ ಬಗ್ಗೆಯೂ ಎಲ್ಲ ವಿವರಗಳನ್ನು ಬಹಿರಂಗಪಡಿಸಲಾಗಿದೆ. 124.8-ಸಿಸಿ ಸಿಂಗಲ್-ಸಿಲಿಂಡರ್ ಎಂಜಿನ್‌ನ್ನು ಹೊಂದಿದ್ದು, 7.1 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 9.4 ಎನ್ಎಂ (ನ್ಯೂಟನ್ ಮೀಟರ್) ಹೊರಹಾಕುತ್ತದೆ. 1.4-ಕೆಜಿಯ ಸಿಎನ್‌ಜಿ ಹಾಗೂ 2-ಲೀಟರ್‌ನಷ್ಟು ಪೆಟ್ರೋಲ್ ಫ್ಯುಯೆಲ್ ಟ್ಯಾಂಕ್‌ನ್ನು ಪಡೆದಿದೆ.
ಈ ಸ್ಕೂಟರ್ ಸಿಎನ್‌ಜಿ ಮೋಡ್‌ನಲ್ಲಿ1 ಕೆಜಿಗೆ 84 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ ಎಂದು ಕಂಪನಿಯು ಹೇಳಿಕೊಂಡಿದೆ. ಒಟ್ಟಾರೆ 226 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸೈಡ್-ಸ್ಟ್ಯಾಂಡ್ ಇಂಡಿಕೇಟರ್, ಯುಎಸ್‌ಬಿ ಚಾರ್ಜರ್ ಹಾಗೂ ಟಿವಿಎಸ್ ಕನೆಕ್ಟ್ ಅಪ್ಲಿಕೇಶನ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.
ಹೊಸ 'ಟಿವಿಎಸ್ ಜುಪಿಟರ್ ಸಿಎನ್‌ಜಿ' ಸ್ಕೂಟರ್ ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸುವ ಸಾಧ್ಯತೆಯಿದೆ. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಮತ್ತು ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿರಲಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿರಲಿದೆ. ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಪಡೆದಿರಲಿದೆ ಎಂದು ಹೇಳಲಾಗಿದೆ.
'ಟಿವಿಎಸ್ ಜುಪಿಟರ್ 125' ವಿಶೇಷತೆಗಳೇನು:
ಇದು ರೂ.83,250 ರಿಂದ ರೂ.92,250 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.8-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.
'ಟಿವಿಎಸ್ ಜುಪಿಟರ್ 110' ಹೇಗಿದೆ:
ಈ ಸ್ಕೂಟರ್ ರೂ.ರೂ.76.150 ರಿಂದ ರೂ.88,350 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 113-ಸಿಸಿ ಸಿಂಗಲ್-ಸಿಲಿಂಡರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಪುಲ್-ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








