TVS: ಟಿವಿಎಸ್ ಅಬ್ಬರಕ್ಕೆ ಬೆಚ್ಚಿಬಿದ್ದ ಎದುರಾಳಿಗಳು.. ಆಕ್ಟಿವಾ ಪ್ರತಿಸ್ಪರ್ಧಿಗೆ ಫುಲ್ ಡಿಮ್ಯಾಂಡ್.. ಮುಗಿಬಿದ್ದ ಗ್ರಾಹಕರು!
'ಹೋಂಡಾ ಆಕ್ಟಿವಾ'ಗೆ ಟಿವಿಎಸ್ ಜುಪಿಟರ್ (TVS Jupiter) ಪ್ರಬಲವಾದ ಪ್ರತಿಸ್ಪರ್ಧಿಯಾಗಿದೆ. ಈ ಸ್ಕೂಟರ್‌ಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಡಿಸೆಂಬರ್-2025) ಭಾರೀ ಸಂಖ್ಯೆಯಲ್ಲಿ ಮಾರಾಟಗೊಂಡಿದೆ. ಒಟ್ಟು 1,20,477 ಯುನಿಟ್ 'ಜುಪಿಟರ್'ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. 2024ರ ಇದೇ ಅವಧಿಯಲ್ಲಿ 88,668 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 35.87 ಪ್ರಗತಿಯಾಗಿದೆ.
ಡಿಸೆಂಬರ್‌ನಲ್ಲಿ 'ಟಿವಿಎಸ್ ಜುಪಿಟರ್' ಮಾರಾಟವು ಹೆಚ್ಚಳಗೊಳ್ಳಲು ಹಲವು ಕಾರಣಗಳಿವೆ. ಇದು ದೀರ್ಘಕಾಲ ಬಾಳಿಕೆ ಬರುತ್ತದೆ. ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದ್ದು, ಉತ್ತಮ ಇಂಧನ ದಕ್ಷತೆಯಿಂದಲೂ ಖ್ಯಾತಿ ಗಳಿಸಿದೆ. ಜೊತೆಗಿದು ದಿನಬಳಕೆಗೂ ತುಂಬಾನೇ ಸೂಕ್ತವಾಗಿದೆ. ಹೀಗಾಗಿ, ಮಾರಾಟ ಸಂಖ್ಯೆಯು ಅಧಿಕಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.

ನೂತನ 'ಟಿವಿಎಸ್ ಜುಪಿಟರ್' ಎರಡು ವಿಧದಲ್ಲಿ ಲಭ್ಯವಿದೆ. ಅವುಗಳೆಂದರೆ ಜುಪಿಟರ್ 110 ಹಾಗೂ ಜುಪಿಟರ್ 125 ಎಂದು. ಇವುಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ.
ಟಿವಿಎಸ್ ಜುಪಿಟರ್ 110 (TVS Jupiter 110):
ಇದು ರೂ.76.150 ರಿಂದ ರೂ.88,350 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್, ಮೆಟಿಯರ್ ರೆಡ್ ಗ್ಲಾಸ್, ಸ್ಟಾರ್‌ಲೈಟ್ ಬ್ಲೂ ಗ್ಲಾಸ್ ಮತ್ತು ಸ್ಟಾರ್‌ಡಸ್ಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ 'ಜುಪಿಟರ್ 110' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 113-ಸಿಸಿ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 8.29 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ. ಸರಿ ಸುಮಾರು 105 ಕೆಜಿ ತೂಕವಿದೆ.
ಈ ಸ್ಕೂಟರ್ ಪುಲ್ ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಹಾಗೂ ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಹೈಡ್ರಾಲಿಕ್ ಮತ್ತು ಹಿಂಭಾಗ (ರೇರ್) 3-ಸ್ಟೆಪ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಜುಪಿಟರ್ 125 (TVS Jupiter 125):
ಇದನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.83,250 ರಿಂದ ರೂ.92,250 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಟೈಟಾನಿಯಂ ಗ್ರೇ, ಪ್ರಿಸ್ಟೈನ್ ವೈಟ್, ಡಾನ್ ಆರೆಂಜ್, ಸ್ಪಾರ್ಕ್ಲಿಂಗ್ ಬ್ಲ್ಯಾಕ್, ಎಲೈಟ್ ಗ್ರೀನ್ ಮತ್ತು ಐವರಿ ಬ್ರೌನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1275 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ. ಬರೋಬ್ಬರಿ 108 ಕೆಜಿ ತೂಕವಿದೆ.
ನೂತನ 'ಜುಪಿಟರ್ 125' ಸ್ಕೂಟರ್ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 124.8-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 16.72 ಸೆಕೆಂಡುಗಳಲ್ಲಿ 0 ರಿಂದ 80 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್‌ನಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.


Click it and Unblock the Notifications








