TVS: ಇದು ನಂ.1 ಆಕ್ಟಿವಾ ಅಲ್ಲ.. ಆಫೀಸ್‌ಗೆ ಹೋಗೋರಿಗೆ ಈ ಅಗ್ಗದ ಟಿವಿಎಸ್ ಸ್ಕೂಟರ್ ಬೆಸ್ಟ್ ಚಾಯ್ಸ್.. 50 Km ಮೈಲೇಜ್!
ಹೋಂಡಾ ಆಕ್ಟಿವಾ (Honda Activa) ನಂಬರ್ 1 ಸ್ಕೂಟರ್ ಎಂದೇ ಮನೆ ಮಾತಾಗಿದೆ. ಇದಕ್ಕೆ ಟಿವಿಎಸ್ ಟಿವಿಎಸ್ ಜುಪಿಟರ್ (TVS Jupiter) ನೇರವಾದ ಎದುರಾಳಿಯಾಗಿದೆ. ನೀವು ಪ್ರತಿನಿತ್ಯ ಆಫೀಸ್‌ಗೆ ಹೋಗುವವರಾಗಿದ್ದು, ನೂತನ ಸ್ಕೂಟರ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ 'ಜುಪಿಟರ್' ಬೆಸ್ಟ್ ಚಾಯ್ಸ್ ಆಗಲಿದೆ. ಇದು ಜುಪಿಟರ್ 110 ಹಾಗೂ ಜುಪಿಟರ್ 125 ಎಂಬ ಎರಡು ವಿಧದಲ್ಲಿ ಲಭ್ಯವಿದೆ. ಬನ್ನಿ, ಈ ಮಾಡೆಲ್‌ಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಟಿವಿಎಸ್ ಜುಪಿಟರ್ 110 (TVS Jupiter 110):
ಈ ಸ್ಕೂಟರ್‌ನ್ನು ಜನಮೆಚ್ಚಿದ್ದಾರೆ. ರೂ.73,400 ರಿಂದ ರೂ.86,900 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಡ್ರಮ್, ಡ್ರಮ್ ಅಲಾಯ್, ಡ್ರಮ್ ಎಸ್ಎಕ್ಸ್‌ಸಿ, ಡಿಸ್ಕ್ ಎಸ್ಎಕ್ಸ್‌ಸಿ ಮತ್ತು ಸ್ಪೆಷಲ್ ಎಡಿಷನ್ ಎಂಬ ರೂಪಾಂತರಗಳೊಂದಿಗೂ ದೊರೆಯುತ್ತದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಉತ್ತಮವಾದ ಎಲ್ಇಡಿ ಹೆಡ್‌ಲ್ಯಾಂಪ್, ಟರ್ನ್ ಇಂಡಿಕೇಟರ್ ಮತ್ತು ಎಲ್ಇಡಿ ಟೈಲ್ ಲ್ಯಾಂಪ್‌ನ್ನು ಒಳಗೊಂಡಿದೆ.

ಇದು ಮೆಟಿಯರ್ ರೆಡ್ ಗ್ಲಾಸ್, ಸ್ಟಾರ್‌ಲೈಟ್ ಬ್ಲೂ ಗ್ಲಾಸ್, ಡಾನ್ ಬ್ಲೂ ಮ್ಯಾಟ್, ಗ್ಯಾಲಕ್ಟಿಕ್ ಕಾಪರ್ ಮ್ಯಾಟ್, ಲೂನಾರ್ ವೈಟ್ ಗ್ಲಾಸ್ ಮತ್ತು ಟ್ವಿಲೈಟ್ ಪರ್ಪಲ್ ಗ್ಲಾಸ್ ಎಂಬ ಆಕರ್ಷಕ ಬಣ್ಣಗಳೊಂದಿಗೂ ದೊರೆಯುತ್ತದೆ. ಹೆಚ್ಚು ವಿಶಾಲವಾಗಿದ್ದು, 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ನೂತನ 'ಜುಪಿಟರ್ 110' ಸ್ಕೂಟರ್ 113-ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 50 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5.1 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಹೊಂದಿದೆ. 82 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 8.29 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸರಿ ಸುಮಾರು 105 ಕೆಜಿ ತೂಕವಿದೆ.

ಈ ಸ್ಕೂಟರ್ ಪುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಬ್ಲೂಟೂತ್ ಕನೆಕ್ಟಿವಿಟಿಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗೂ ಹೆಸರುವಾಸಿಯಾಗಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಟಿವಿಎಸ್ ಜುಪಿಟರ್ 125 (TVS Jupiter 125):
ಇದನ್ನು ಗ್ರಾಹಕರು ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ರೂ.84,150 ರಿಂದ ರೂ.93,110 ಬೆಲೆಯನ್ನು ಒಳಗೊಂಡಿದೆ. ಡ್ರಮ್, ಡಿಸ್ಕ್ ಮತ್ತು ಸ್ಮಾರ್ಟ್ ಕನೆಕ್ಟ್ ಎಂಬ ರೂಪಾಂತರಗಳೊಂದಿಗೂ ಲಭ್ಯವಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಪ್ರಿಸ್ಟೈನ್ ವೈಟ್, ಇಂಡಿಬ್ಲೂ, ಡಾನ್ ಆರೆಂಜ್ ಮತ್ತು ಟೈಟಾನಿಯಂ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಸಾಕಷ್ಟು ವಿಶಾಲ ಗಾತ್ರದಲ್ಲಿದೆ. 163 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,275 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಸ್ಕೂಟರ್ 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 50 ರಿಂದ 52.91 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5.1 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ತನ್ನದಾಗಿಸಿಕೊಂಡಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಬರೀ 8.21 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಬರೋಬ್ಬರಿ 108 ತೂಕವಿದೆ.
ಹೊಸ 'ಜುಪಿಟರ್ 125' ಡಿಜಿಟಲ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಸಾಕೆಟ್ ಮತ್ತು ಎಲೆಕ್ಟ್ರಿಕ್ ಸೈಲಂಟ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 3-ಸ್ಟೆಪ್ ಅಡ್ಜಸ್ಟೇಬಲ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಜೊತೆಗೆ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.


Click it and Unblock the Notifications








