TVS: ಪ್ರತಿದಿನ 1180 ಸ್ಕೂಟರ್‌ಗಳು ಸೇಲ್ಸ್.. ಜನ ಮುಗಿಬಿದ್ದು ಖರೀದಿ.. ಟಿವಿಎಸ್ ಎನ್‌ಟಾರ್ಕ್‌ಗೆ ಫುಲ್ ಡಿಮ್ಯಾಂಡ್!

ಟಿವಿಎಸ್ ಎನ್‌ಟಾರ್ಕ್‌ (TVS Ntorq) ಸ್ಟೈಲಿಶ್ ಸ್ಕೂಟರ್‌ ಆಗಿದ್ದು, ದಿನದಿಂದ ದಿನಕ್ಕೆ ಬೇಡಿಕೆಯೂ ಹೆಚ್ಚಾಗುತ್ತಿದೆ. ಗ್ರಾಹಕರು ಕೂಡ ನಾ ಮುಂದು - ತಾ ಮುಂದು ಎಂಬಂತೆ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಕಳೆದ ತಿಂಗಳು (ಜನವರಿ - 2026) ಭಾರೀ ಸಂಖ್ಯೆಯಲ್ಲಿಯೇ ಮಾರಾಟಗೊಂಡಿದೆ. ಒಟ್ಟು 36,596 ಯುನಿಟ್‌ಗಳನ್ನು ಖರೀದಿದಾರರಿಗೆ ವಿತರಿಸಲಾಗಿದೆ. ಅಂದರೆ ಪ್ರತಿದಿನ 1,180 'ಎನ್‌ಟಾರ್ಕ್‌' ಸ್ಕೂಟರ್‌ಗಳು ಮಾರಾಟವಾಗಿವೆ. 2025ರ ಇದೇ ಅವಧಿಯಲ್ಲಿ 23,795 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ-ಅಂಶವನ್ನು ಲೆಕ್ಕ ಹಾಕಿದಾಗ ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 53.80% ಬೆಳವಣಿಗೆಯಾಗಿದೆ.

ನೂತನ 'ಟಿವಿಎಸ್ ಎನ್‌ಟಾರ್ಕ್‌' ಮಾರಾಟವು ಈ ಪರಿಪ್ರಮಾಣದಲ್ಲಿ ಅಧಿಕಗೊಳ್ಳಲು ಹಲವು ಕಾರಣಗಳಿವೆ. ಇದನ್ನು ಯುವ ಗ್ರಾಹಕರಿದಾಗಿಯೇ ಸಿದ್ದಪಡಿಲಾಗಿದೆ. ಕಡಿಮೆ ನಿರ್ವಹಣಾ ವೆಚ್ಚ ಹೊಂದಿದ್ದು, ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದೆ. ಹೀಗಾಗಿ, ಉತ್ತಮ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

TVS Ntorq January 2026 Sales Report

ಈ 'ಟಿವಿಎಸ್ ಎನ್‌ಟಾರ್ಕ್‌' ಎರಡು ವಿಧದಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅವುಗಳೆಂದರೆ, ಎನ್‌ಟಾರ್ಕ್ 125 ಮತ್ತು ಎನ್‌ಟಾರ್ಕ್ 150 ಎಂದು. ಇವುಗಳು ನೋಡಲು ತುಂಬಾ ಚೆನ್ನಾಗಿದ್ದು, ಹಲವು ಹೊಸತನಗಳಿಗೂ ಸಾಕ್ಷಿಯಾಗಿವೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಸಿಗುತ್ತವೆ.

ಟಿವಿಎಸ್ ಎನ್‌ಟಾರ್ಕ್ 125 (TVS Ntorq 125) ವಿಶೇಷತೆಗಳೇನು:

ಇದು ಕನಿಷ್ಠ ರೂ.81,250 ಹಾಗೂ ಗರಿಷ್ಠ ರೂ.1 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನಾರ್ಡೊ ಗ್ರೇ, ಹಾರ್ಲೆಕ್ವಿನ್ ಬ್ಲ್ಯೂ, ಟರ್ಕೋಯಿಸ್ ಬ್ಲ್ಯೂ, ಮ್ಯಾಟ್ ಬ್ಲ್ಯಾಕ್, ರೇಸ್ ರೆಡ್ ಹಾಗೂ ಬ್ಲೇಜ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. ಸಾಕಷ್ಟು ವಿಶಾಲವಾಗಿದ್ದು, 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

TVS Ntorq January 2026 Sales Report

ನೂತನ 'ಎನ್‌ಟಾರ್ಕ್ 125' ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಹೊಂದಿದೆ. 124.8 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 9.5 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 10.6 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 35 ರಿಂದ 45 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 95 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 8.07 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಸ್ಕೂಟರ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕನ್ಸೋಲ್, ಬ್ಲೂಟೂತ್ ಕನೆಕ್ಟಿವಿಟಿ ಮತ್ತು ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸವಾರರ ರಕ್ಷಣೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಹೈಡ್ರಾಲಿಕ್ ಡ್ಯಾಂಪರ್ಸ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಟಿವಿಎಸ್ ಎನ್‌ಟಾರ್ಕ್ 150 (TVS Ntorq 150) ಹೇಗಿದೆ:

ಇದು ರೂ.1.09 ಲಕ್ಷದಿಂದ ರೂ.1.18 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಸಿಲ್ವರ್, ರೇಸಿಂಗ್ ರೆಡ್, ಟರ್ಬೊ ಬ್ಲೂ ಮತ್ತು ನೈಟ್ರೋ ಗ್ರೀನ್ ಎಂಬ ಬಣ್ಣದೊಂದಿಗೂ ಲಭ್ಯವಿದೆ. 155 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 1,285 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಹೊಸ 'ಎನ್‌ಟಾರ್ಕ್ 150' ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 149.7 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 13.2 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 14.2 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 40 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 104 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಬರೀ 6.3 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.

ಈ ಸ್ಕೂಟರ್ ಫುಲ್-ಟಿಎಫ್‌ಟಿ ಡಿಸ್‌ಪ್ಲೇ, ಟ್ರಾಕ್ಷನ್ ಕಂಟ್ರೋಲ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ & ಹಿಂಭಾಗ (ರೇರ್) ಮೊನೊಶಾಕ್‌ ಸಸ್ಪೆನ್ಷನ್ ಸೆಟಪ್‌ನ್ನು ಒಳಗೊಂಡಿದೆ. ಡ್ರಮ್/ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Thursday, February 26, 2026, 14:06 [IST]
English summary
Tvs ntorq january 2026 sales report
Read more on tvs motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+