ಬಡವರ ಬೈಕ್‌ಯಿದು.. ಇದೇ ಹೀರೋ ಸ್ಪ್ಲೆಂಡರ್‌ನ ಪ್ರತಿಸ್ಪರ್ಧಿ, 68,100 ರೂಪಾಯಿ.. ಭರ್ತಿ 700 Km ಮೈಲೇಜ್!

ಟಿವಿಎಸ್ ರೇಡಿಯನ್ (Tvs Radeon) ಜನಪ್ರಿಯ ಪ್ರಯಾಣಿಕ ಮೋಟಾರ್‌ಸೈಕಲ್‌ ಆಗಿದೆ. ಇದು 'ಹೀರೋ ಸ್ಪ್ಲೆಂಡರ್‌'ನ ಪ್ರತಿಸ್ಪರ್ಧಿ ಎಂದೇ ಹೆಸರುವಾಸಿಯಾಗಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ಬೈಕ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ರೇಡಿಯನ್' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ, ಈ ಮೋಟಾರ್‌ಸೈಕಲ್‌ನ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬೆಲೆ & ರೂಪಾಂತರಗಳು (Price & Variants):

ಇದು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. ಕನಿಷ್ಠ ರೂ.68,100 ಹಾಗೂ ಗರಿಷ್ಠ ರೂ.80,300 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಬ್ಲ್ಯಾಕ್ ಎಡಿಷನ್ (All Black Edition), ಬೇಸ್ ಎಡಿಷನ್ (Base Edition), ಡಿಜಿಟಲ್ ಕ್ಲಸ್ಟರ್ ಡ್ರಮ್ (Digi Drum) ಮತ್ತು ಡಿಜಿಟಲ್ ಕ್ಲಸ್ಟರ್ ಡಿಸ್ಕ್ (Digi Disc) ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

TVS Radeon Bike Price Variants Design Colours Engine Mileage Features And All Details

ವಿನ್ಯಾಸ & ಬಣ್ಣಗಳು (Design & Colours):

ಈ ಬೈಕ್ ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾದ ರೌಂಡ್ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಸ್ಟಾರ್‌ಲೈಟ್ ಬ್ಲ್ಯೂ, ಮೆಟಲ್ ಬ್ಲ್ಯಾಕ್, ರಾಯಲ್ ಪರ್ಪಲ್, ಟೈಟಾನಿಯಂ ಗ್ರೇ ಹಾಗೂ ಆಲ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಸುತ್ತಳತೆ (Dimensions):

'ಟಿವಿಎಸ್ ರೇಡಿಯನ್' 2,025 ಮಿ.ಮೀ ಉದ್ದ, 705 ಮಿ.ಮೀ ಅಗಲ ಹಾಗೂ 1,080 ಮಿ.ಮೀ ಎತ್ತರವಿದೆ. 180 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1265 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ. ಸರಿ ಸುಮಾರು 115 ಕೆಜಿ ತೂಕವಿದೆ.

TVS Radeon Bike Price Variants Design Colours Engine Mileage Features And All Details

ಕಾರ್ಯಕ್ಷಮತೆ (Permanence):

ಇದು ಬೆಲೆಗೆ ತಕ್ಕಂತೆ ಬಲಿಷ್ಠವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 109.7-ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೋಲ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 8.19 ಬಿಹೆಚ್‌ಪಿ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 8.7 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ.

ಮೈಲೇಜ್ (Mileage):

ಈ ಮೋಟಾರ್‌ಸೈಕಲ್‌ ಉತ್ತಮ ಇಂಧನ ದಕ್ಷತೆಗೂ ಹೆಸರುವಾಸಿಯಾಗಿದ್ದು, ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 60 ರಿಂದ 70 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 10 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಭರ್ತಿಯಾಗಿ ತುಂಬಿಸಿದರೆ 600 ರಿಂದ 700 ಕಿಲೋಮೀಟರ್‌ವರೆಗೆ ಓಡಬಲ್ಲದು.

TVS Radeon Bike Price Variants Design Colours Engine Mileage Features And All Details

ವೈಶಿಷ್ಟ್ಯಗಳು (Features):

ಟಿವಿಎಸ್ ರೇಡಿಯನ್ ಬೈಕ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಎಲೆಕ್ಟ್ರಿಕ್ ಸೆಲ್ಫ್-ಸ್ಟಾರ್ಟ್, ಸೈಡ್ ಸ್ಟ್ಯಾಂಡ್ ಇಂಡಿಕೇಟರ್ ಮತ್ತು ಸರ್ವಿಸ್ ಡ್ಯೂ ಇಂಡಿಕೇಟರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. 90 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 7.53 ಸೆಕೆಂಡುಗಳಲ್ಲಿ 0 ರಿಂದ 60 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 780 ಮಿ.ಮೀ ಇದೆ.

ಸಸ್ಪೆನ್ಷನ್ ಸೆಟಪ್‌ & ಬ್ರೇಕಿಂಗ್ ಸಿಸ್ಟಮ್ (Suspension Setup & Braking System):

ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ದೃಷ್ಟಿಯಿಂದ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) 5-ಸ್ಟೆಪ್ ಪ್ರಿ ಲೋಡ್ ಅಡ್ಜಸ್ಟೇಬಲ್ ಟ್ವಿನ್ ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್‌ನ್ನು ಹೊಂದಿದೆ. ಡ್ರಮ್/ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತವನ್ನು ಒದಗಿಸಲು 18-ಇಂಚಿನ ಪ್ರೀಮಿಯಂ 5-ಸ್ಪೋಕ್ ಅಲಾಯ್ ವೀಲ್‌ಗಳು ಹಾಗೂ ಟ್ಯೂಬ್‌ಲೆಸ್ ಟೈರ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, January 9, 2026, 8:30 [IST]
English summary
Tvs radeon bike price variants design colours engine mileage features and all details
Read more on tvs motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+