TVS: ಬಡವರಿಗೆ ಪರ್ಫೆಕ್ಟ್ ಬಂಡಿಯಿದು.. ಬರೀ 44,000 ರೂಪಾಯಿ.. 1 ಲೀ. ಪೆಟ್ರೋಲ್ ಹಾಕಿಸಿದ್ರೆ 60 Km ಮೈಲೇಜ್!
ಟಿವಿಎಸ್ ಎಕ್ಸ್ಎಲ್ 100 (TVS XL 100) ಜನಪ್ರಿಯ ಮೊಪೆಡ್ ಎಂದೇ ಹೆಸರುವಾಸಿಯಾಗಿದೆ. ಇದು ದಿನಬಳಕೆಗೆ ಹೆಚ್ಚು ಸೂಕ್ತವಾಗಿದೆ. ಹಳ್ಳಿ ಹಾಗೂ ನಗರ ಪ್ರದೇಶಗಳಲ್ಲಿ ಸುಲಭವಾಗಿ ಬಳಕೆ ಮಾಡಬಹುದು. ನೀವು ಹೊಚ್ಚ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ ಇದೇ 'ಎಕ್ಸ್ಎಲ್ 100' ಬೆಸ್ಟ್ ಚಾಯ್ಸ್ ಆಗಲಿದೆ. ಬನ್ನಿ.. ಈ ಮೊಪೆಡ್‌ನ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಬೆಲೆ & ರೂಪಾಂತರಗಳು (Price & Variants):
ಇದು ಅತಿಕಡಿಮೆ ಬೆಲೆಯಲ್ಲಿ ಲಭ್ಯವಿದೆ. ಕನಿಷ್ಠ ರೂ.44,050 ಹಾಗೂ ಗರಿಷ್ಠ ರೂ.59,050 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆವಿ ಡ್ಯೂಟಿ (Heavy Duty), ಹೆವಿಡ್ಯೂಟಿ ಐ-ಟಚ್‌ಸ್ಟಾರ್ಟ್ (HeavyDuty i-Touchstart), ಹೆವಿಡ್ಯೂಟಿ ಐ-ಟಚ್‌ಸ್ಟಾರ್ಟ್ ವಿನ್ ಎಡಿಷನ್ (HeavyDuty i-Touchstart Win Edition), ಕಂಫರ್ಟ್ ಐ-ಟಚ್‌ಸ್ಟಾರ್ಟ್ (Comfort i-Touchstart) ಹಾಗೂ ಹೆಚ್‌ಡಿ ಅಲಾಯ್ (HD Alloy) ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ.

ವಿನ್ಯಾಸ & ಬಣ್ಣಗಳು (Design & Colours):
ನೂತನ 'ಟಿವಿಎಸ್ ಎಕ್ಸ್ಎಲ್ 100' ತುಂಬಾ ಸರಳವಾದ ವಿನ್ಯಾಸವನ್ನು ಹೊಂದಿದೆ. ಉತ್ತಮವಾದ ಹೆಡ್‌ಲ್ಯಾಂಪ್, ಬಲ್ಬ್ ಇಂಡಿಕೇಟರ್‌ಗಳು ಮತ್ತು ಟೈಲ್ ಲ್ಯಾಂಪ್‌ನ್ನು ಪಡೆದಿದೆ. ಮಿನರಲ್ ಪರ್ಪಲ್, ಡಿಲೈಟ್ ಬ್ಲೂ, ಬೀವರ್ ಬ್ರೌನ್, ಲಸ್ಟರ್ ಗೋಲ್ಡ್, ಮಿಂಟ್ ಬ್ಲೂ, ರೆಡ್, ಬ್ಲೂ, ಗ್ರೀನ್, ಗ್ರೇ ಹಾಗೂ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಸುತ್ತಳತೆ (Dimension):
ಈ ಮೊಪೆಡ್ ಹೆಚ್ಚು ವಿಶಾಲವಾಗಿದೆ. 1,895 ಮಿ.ಮೀ ಉದ್ದ, 670 ಮಿ.ಮೀ ಅಗಲ ಹಾಗೂ 1,077 ಮಿ.ಮೀ ಎತ್ತರವಿದೆ. 145 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 1228 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ. ಸರಿ ಸುಮಾರು 89 ಕೆಜಿ ತೂಕವಿದೆ.

ಕಾರ್ಯಕ್ಷಮತೆ (Performance):
ಇದು ಬೆಲೆಗೆ ತಕ್ಕಂತೆ ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 99.7-ಸಿಸಿ ಸಿಂಗಲ್-ಸಿಲಿಂಡರ್, ಏರ್-ಕೂಲ್ಡ್, ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6,000 ಆರ್‌ಪಿಎಂನಲ್ಲಿ 4.4 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 3,500 ಆರ್‌ಪಿಎಂನಲ್ಲಿ 6.5 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ.
ಮೈಲೇಜ್ (Mileage):
ಹೊಸ 'ಟಿವಿಎಸ್ ಎಕ್ಸ್ಎಲ್ 100' ಕಡಿಮೆ ನಿರ್ವಹಣಾ ವೆಚ್ಚವನ್ನು ಹೊಂದಿದೆ. ಉತ್ತಮ ಇಂಧನ ದಕ್ಷತೆಗೂ ಮನೆ ಮಾತಾಗಿದೆ. 1 ಲೀಟರ್ ಪೆಟ್ರೋಲ್ ಹಾಕಿಸಿದರೆ 60 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 4 ಲೀಟರ್ ಸಾಮರ್ಥ್ಯದ ಫ್ಯುಯೆಲ್ ಟ್ಯಾಂಕ್‍ನ್ನು ಒಳಗೊಂಡಿದೆ. ಒಮ್ಮೆ ಪೂರ್ತಿಯಾಗಿ ತುಂಬಿಸಿದರೆ 240 ಕಿಲೋಮೀಟರ್‌ವರೆಗೆ ಕ್ರಮಿಸಬಲ್ಲದು.

ವೈಶಿಷ್ಟ್ಯಗಳು (Features):
ಈ ಮೊಪೆಡ್ ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್, ಸೈಲೆಂಟ್ ಸ್ಟಾರ್ಟರ್ ಮತ್ತು ಮೊಬೈಲ್ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 65 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 14 ಸೆಕೆಂಡುಗಳಲ್ಲಿ 0 ರಿಂದ 50 ವೇಗವನ್ನು ಪಡೆಯಲಿದೆ. ಸೀಟ್ ಎತ್ತರವು 780 ಮಿ.ಮೀ ಇದೆ.
ಸಸ್ಪೆನ್ಷನ್ ಸೆಟಪ್ & ಬೇಕಿಂಗ್ ಸಿಸ್ಟಮ್ (Suspension Setup & Braking System):
ಇದು ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ ಹಾಗೂ ಹಿಂಭಾಗ (ರೇರ್) ಟ್ವಿನ್ ಶಾಕ್ ಅಬ್ಸಾರ್ಬರ್ ಸಸ್ಪೆನ್ಷನ್ ಸೆಟಪ್‌ನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ. ರಸ್ತೆಯ ಮೇಲೆ ಬಿಗಿಯಾದ ಹಿಡಿತ ಒದಗಿಸಲು 16-ಇಂಚಿನ ಅಲಾಯ್ ವೀಲ್‌ಗಳು ಮತ್ತು ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ.
ಪ್ರತಿಸ್ಪರ್ಧಿ ದ್ವಿಚಕ್ರ ವಾಹನಗಳು (Rival Two Wheelers):
ಹೊಸ 'ಟಿವಿಎಸ್ ಎಕ್ಸ್ಎಲ್ 100'ಗೆ ಯಾವುದೇ ನೇರವಾದ ಎದುರಾಳಿಯಿಲ್ಲ, ಆದರೂ ಬಜಾಜ್ ಪ್ಲಾಟಿನಂ 100 (Bajaj Platina 100), ಹೀರೋ ಹೆಚ್ಎಫ್ ಡಿಲಕ್ಸ್ (Hero HF Deluxe) ಹಾಗೂ (Honda Shine 100) ಬೈಕ್‌ಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಿವೆ.


Click it and Unblock the Notifications








