ಯುಗಾದಿಗೆ ಹೊಸ ಗಾಡಿ ತೆಗೆದುಕೊಳ್ಳಬೇಕೇ.. ಈ ಬೈಕ್‌ಗಳು ಫರ್ಫೆಕ್ಟ್.. 66,000 ರೂ.ನಿಂದ ಶುರು.. 90 Km ವರೆಗೆ ಮೈಲೇಜ್!
ನಾಳೆ (ಮಾರ್ಚ್ 19) ಚಾಂದ್ರಮಾನ ಯುಗಾದಿ ಬಂದಿದ್ದು, ಭಾರೀ ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ಹಬ್ಬದ ಸಂದರ್ಭದಲ್ಲಿ ಹೊಚ್ಚ ಹೊಸ ಮೋಟಾರ್‌ಸೈಕಲ್‌ವೊಂದನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಬಜಾಜ್ ಪ್ಲಾಟಿನಾ 100, ಹೀರೋ ಸ್ಪ್ಲೆಂಡರ್ ಪ್ಲಸ್, ಟಿವಿಎಸ್ ರೇಡಿಯನ್, ಹೋಂಡಾ ಶೈನ್ 100, ಹೀರೋ ಗ್ಲಾಮರ್, ಹೋಂಡಾ ಶೈನ್ 125 ಮತ್ತು ಹೋಂಡಾ ಎಸ್‌ಪಿ 160 ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಬಜಾಜ್ ಪ್ಲಾಟಿನಾ 100 (Bajaj Platina 100):
ಇದೊಂದು ಪ್ರಮುಖ ಬೈಕ್ ಆಗಿದ್ದು, ಅಗ್ಗದ ದರದಲ್ಲೂ ಲಭ್ಯವಿದೆ. ರೂ.66,015 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 102 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 75 ರಿಂದ 90 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ತನ್ನದಾಗಿಸಿಕೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.

ಹೀರೋ ಸ್ಪ್ಲೆಂಡರ್ ಪ್ಲಸ್ (Hero Splendor Plus):
ಈ ಮೋಟಾರ್‌ಸೈಕಲ್‌ನ್ನು ಗ್ರಾಹಕರು ಮೆಚ್ಚಿದ್ದಾರೆ. ರೂ.74,152 ರಿಂದ ರೂ.76,437 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 97.2 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 70 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಅನಲಾಗ್ ಇನ್ಸ್ಟ್ರುಮೆಂಟ್ ಕನ್ಸೋಲ್ & ಐ3ಎಸ್ ಟೆಕ್ನಾಲಜಿಯನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಟಿವಿಎಸ್ ರೇಡಿಯನ್ (Tvs Radeon):
ಇದು ಪ್ರಖ್ಯಾತ ಬೈಕ್ ಎಂದೇ ಹೆಸರುವಾಗಿದೆ. ರೂ.68,100 ರಿಂದ ರೂ.80,300 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 109.7 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 60 ರಿಂದ 70 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಹಾಗೂ ಎಲೆಕ್ಟ್ರಿಕ್ ಸೆಲ್ಫ್-ಸ್ಟಾರ್ಟ್‌ನ್ನು ತನ್ನದಾಗಿಕೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಶೈನ್ 100 (Honda Shine 100):
ಈ ಮೋಟಾರ್‌ಸೈಕಲ್‌ನ್ನು ಗ್ರಾಹಕರು ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ರೂ.65,243 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 98.98 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 4-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 65 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಟ್ವಿನ್-ಪಾಡ್ ಇನ್ಸ್ಟ್ರುಮೆಂಟ್ ಕನ್ಸೋಲ್‌ನ್ನು ಒಳಗೊಂಡಿದೆ. ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.
ಹೀರೋ ಗ್ಲಾಮರ್ (Hero Glamour):
ಇದೊಂದು ನಂಬಿಕಾರ್ಹ ಬೈಕ್ ಆಗಿದೆ. ರೂ.82,813 ರಿಂದ ರೂ.86,501 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 124.7 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 55 ರಿಂದ 65 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಕನ್ಸೋಲ್ & ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನ್ನು ಪಡೆದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೋಂಡಾ ಶೈನ್ 125 (Honda Shine 125):
ಈ ಮೋಟಾರ್‌ಸೈಕಲ್‌ನ್ನು ಜನ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ರೂ.80,852 ರಿಂದ ರೂ.85,211 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 123.94 ಸಿಸಿ ಪೆಟ್ರೋಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 50 ರಿಂದ 60 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಹೋಂಡಾ ಎಸ್‌ಪಿ 160 (Honda SP 160):
ಇದು ವಿಶ್ವಾಸಾರ್ಹ ಬೈಕ್ ಆಗಿ ಹೊರಹೊಮ್ಮಿದೆ. ರೂ.1.15 ಲಕ್ಷದಿಂದ ರೂ.1.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 162.71 ಸಿಸಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 50 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 4.2-ಇಂಚಿನ ಟಿಎಫ್‌ಟಿ ಸ್ಕ್ರೀನ್ & ಸ್ಮಾರ್ಟ್‌ಫೋನ್ ಕನೆಕ್ಟಿವಿಟಿಯನ್ನು ಹೊಂದಿದೆ. ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








