Ugadi: ಈ ಯುಗಾದಿಗೆ ಹೊಸ ಸ್ಕೂಟರ್ ಖರೀದಿಸಬೇಕೇ.. ಬೆಸ್ಟ್ ಮಾಡೆಲ್‌ಗಳಿವು.. ಕಡಿಮೆ ಬೆಲೆ.. ತಕ್ಷಣ ಶೋರೂಂಗೆ ಹೋಗಿ!
ಮಾರ್ಚ್ 19 ಗುರುವಾರದಂದು ಚಾಂದ್ರಮಾನ ಯುಗಾದಿ (Chandramana Ugadi) ಬಂದಿದ್ದು, ನಾಡಿನೆಲ್ಲೆಡೆ ಸಂಭ್ರಮ - ಸಡಗರದಿಂದ ಆಚರಿಸಲಾಗುತ್ತದೆ. ನೀವು ಈ ಹಬ್ಬದ ಸಂದರ್ಭದಲ್ಲಿ ಹೊಚ್ಚ ಹೊಸ ಸ್ಕೂಟರ್‌ವೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ, ಟಿವಿಎಸ್ ಜುಪಿಟರ್ 110, ಹೋಂಡಾ ಆಕ್ಟಿವಾ 110, ಹೀರೋ ಜೂಮ್ 110, ಟಿವಿಎಸ್ ಐಕ್ಯೂಬ್, ಎಥರ್ ರಿಜ್ಟಾ, ಹೀರೋ ವಿಡಾ ವಿಎಕ್ಸ್2 ಹಾಗೂ ಆಂಪಿಯರ್ ನೆಕ್ಸಸ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತ ವಿವರಗಳನ್ನು ತಿಳಿಯೋಣ.
ಟಿವಿಎಸ್ ಜುಪಿಟರ್ 110 (TVS Jupiter 110):
ಇದೊಂದು ಜನಮೆಚ್ಚಿದ ಸ್ಕೂಟರ್ ಎಂದೇ ಹೆಸರುವಾಸಿಯಾಗಿದೆ. ರೂ.78,250 ರಿಂದ ರೂ.91,050 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 113 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 50 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಪುಲ್-ಡಿಜಿಟಲ್ ಕಲರ್ ಇನ್ಸ್ಟ್ರುಮೆಂಟ್ ಕನ್ಸೋಲ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಆಕ್ಟಿವಾ 110 (Honda Activa 110):
ಈ ಸ್ಕೂಟರ್‌ನ್ನು ಗ್ರಾಹಕರು ಮೆಚ್ಚಿದ್ದಾರೆ. ರೂ.75,433 ರಿಂದ ರೂ.89,806 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 109.51 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 45 ರಿಂದ 50 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 4.2-ಇಂಚಿನ ಟಿಎಫ್‌ಟಿ ಇನ್ಸ್ಟ್ರುಮೆಂಟ್ ಕನ್ಸೋಲ್, ಟರ್ನ್-ಬೈ-ಟರ್ನ್ ನ್ಯಾವಿಗೇಷನ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿಯನ್ನು ಪಡೆದಿದೆ. ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹೀರೋ ಜೂಮ್ 110 (Hero Xoom 110):
ಇದು ನಂಬಿಕಾರ್ಹ ಸ್ಕೂಟರ್ ಆಗಿ ಹೊರಹೊಮ್ಮಿದೆ. ರೂ.76,780 ರಿಂದ ರೂ.82,937 (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 110.9 ಸಿಸಿ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 53 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಫೋನ್ ಚಾರ್ಜಿಂಗ್ ಪೋರ್ಟ್‌ನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಟಿವಿಎಸ್ ಐಕ್ಯೂಬ್ (Tvs iQube):
ಈ ನಂ.1 ಎಲೆಕ್ಟ್ರಿಕ್ ಸ್ಕೂಟರ್‌ನ್ನು ಜನ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ರೂ.1.10 ಲಕ್ಷದಿಂದ ರೂ.1.61 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3,1 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 3.5 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 5.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 94 ರಿಂದ 212 ಕಿ.ಮೀ ವರೆಗೆ ರೇಂಜ್ ನೀಡುತ್ತದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಎಥರ್ ರಿಜ್ಟಾ (Ather Rizta)
ಇದೊಂದು ವಿಶ್ವಾಸಾರ್ಹ ಸ್ಕೂಟರ್ ಎಂದೇ ಜನಜನಿತವಾಗಿದೆ. ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 3.7 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿ.ಮೀ ವರೆಗೆ ರೇಂಜ್ ಕೊಡುತ್ತದೆ. ಎಲ್‌ಸಿಡಿ ಸ್ಕ್ರೀನ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ.

ಹೀರೋ ವಿಡಾ ವಿಎಕ್ಸ್2 (Hero Vida VX2):
ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಮಧ್ಯಮ ವರ್ಗದ ಜನರ ಐರಾವತ ಎಂದು ಕರೆದರೂ ತಪ್ಪಾಗುವುದಿಲ್ಲ. ರೂ.73,850 ರಿಂದ ರೂ.94,800 (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2.2 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 3.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 92 ರಿಂದ 142 ಕಿ.ಮೀ ವರೆಗೆ ರೇಂಜ್ ನೀಡುತ್ತದೆ. ಎಲ್‌ಸಿಡಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ರೇರ್ ಪಿಲಿಯನ್ ಬ್ಯಾಕ್‌ರೆಸ್ಟ್‌ನ್ನು ಹೊಂದಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.

ಆಂಪಿಯರ್ ನೆಕ್ಸಸ್ (Ampere Nexus):
ಇದು ಪ್ರಮುಖ ಎಲೆಕ್ಟ್ರಿಕ್ ಸ್ಕೂಟರ್ ಆಗಿದೆ. ರೂ.1.20 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 136 ಕಿ.ಮೀ ವರೆಗೆ ರೇಂಜ್ ಕೊಡುತ್ತದೆ. ಟಿಎಫ್‌ಟಿ ಟಚ್‌ಸ್ಕ್ರೀನ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ನ್ನು ಒಳಗೊಂಡಿದೆ. ಡಿಸ್ಕ್/ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








