Ultraviolette: ಎಥರ್ ರಿಜ್ಟಾ ಪ್ರತಿಸ್ಪರ್ಧಿಯಿದು.. 261 Km ರೇಂಜ್.. ಶೀಘ್ರದಲ್ಲೇ ಹೊಸ ಅಲ್ಟ್ರಾವೈಲೆಟ್ ಇ-ಸ್ಕೂಟರ್ ವಿತರಣೆ?
ಬೆಂಗಳೂರಿನ ಅಲ್ಟ್ರಾವೈಲೆಟ್ ಆಟೋಮೋಟಿವ್ (Ultraviolette Automotive) ಪ್ರಮುಖ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಕ ಕಂಪನಿಯಾಗಿದೆ. 2025ರ ಮಾರ್ಚ್‌ನಲ್ಲಿ ಮೊಟ್ಟ ಮೊದಲ ಎಲೆಕ್ಟ್ರಿಕ್ ಸ್ಕೂಟರ್ 'ಟೆಸ್ಸೆರಾಕ್ಟ್'ನ್ನು ಬಿಡುಗಡೆಗೊಳಿಸಿತ್ತು. ಇದು ಬುಕ್ಕಿಂಗ್‌ನಲ್ಲೂ ಅಬ್ಬರಿಸಿತ್ತು. 70,000ಕ್ಕೂ ಅಧಿಕ ಸಂಖ್ಯೆಯಲ್ಲಿ ಆರ್ಡರ್‌ಗಳನ್ನು ಪಡೆದುಕೊಂಡಿತ್ತು. ಎಲ್ಲವು ಅಂದುಕೊಂಡರೆ ಜರುಗಿದರೆ, ಅತಿ ಶೀಘ್ರದಲ್ಲೇ ವಿತರಣೆಗಳು ಶುರುವಾಗಲಿದೆ. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ
ಸದ್ಯ, ಅಲ್ಟ್ರಾವೈಲೆಟ್ ಕಂಪನಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ನಮೂದಿಸಿರುವ ವಿವರಗಳ ಪ್ರಕಾರ, 2026ರ ಎರಡನೇ ತ್ರೈಮಾಸಿಕದಲ್ಲಿ 'ಟೆಸ್ಸೆರಾಕ್ಟ್'ನ ಡೆಲಿವರಿಗಳು ಪ್ರಾರಂಭವಾಗಲಿವೆ. ಅಂದರೆ ಏಪ್ರಿಲ್‌ನಿಂದ ಜೂನ್ ಅವಧಿಯಲ್ಲಿ ಗ್ರಾಹಕರ ಮನೆಗಳನ್ನು ತಲುಪಲಿದೆ. ಈಗಲೂ ಪ್ರಿ-ಬುಕ್ಕಿಂಗ್ ತೆರೆಯಲಾಗಿದ್ದು, ರೂ.5000 ಮುಂಗಡ ಹಣ ಕಟ್ಟಿ ಕಾಯ್ದಿರಿಸಬಹುದು.

ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ (Ultraviolette Tesseract) ಎಲೆಕ್ಟ್ರಿಕ್ ಸ್ಕೂಟರ್, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದೆ. 1.45 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದ್ದು, ಎಲ್ಲ ವರ್ಗದ ಜನರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.1.60 ಲಕ್ಷವರೆಗೆ ಆನ್-ರೋಡ್ ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ.
ನೂತನ 'ಟೆಸ್ಸೆರಾಕ್ಟ್' ಇ-ಸ್ಕೂಟರ್ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್ಇಡಿ ಫ್ಲೋಟಿಂಗ್ ಡಿಆರ್‌ಎಲ್‌ಗಳನ್ನು ಒಳಗೊಂಡಿದೆ. ಡೆಸರ್ಟ್ ಬ್ಲ್ಯಾಕ್, ಸೋನಿಕ್ ಪಿಂಕ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಇದು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 3.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್), 5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ ಕ್ರಮವಾಗಿ 162, 220 ಹಾಗೂ 261 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ.
ಈ ಎಲೆಕ್ಟ್ರಿಕ್ ಸ್ಕೂಟರ್ ಟಿಎಫ್‌ಟಿ ಟಚ್‌ಸ್ಕ್ರೀನ್ ಡಿಸ್‌ಪ್ಲೇ, ಕೀಲೆಸ್ ಆಕ್ಸೆಸ್, ಪಾರ್ಕ್ ಅಸಿಸ್ಟ್, ಕ್ರೂಸ್ ಕಂಟ್ರೋಲ್, ಹಿಲ್ ಹೋಲ್ಡ್, ನ್ಯಾವಿಗೇಷನ್ & ಮ್ಯೂಸಿಕ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರಲ್ಲಿರುವ ಬ್ಯಾಟರಿ ಪ್ಯಾಕ್ ಫಾಸ್ಟ್ ಚಾರ್ಜಿಂಗ್‌ನ್ನು ಉಪಯೋಗಿಸಿದಾಗ, ಬರೀ 1 ಗಂಟೆಯೊಳಗೆ ಶೇಕಡ 80% ವರೆಗೆ ಚಾರ್ಜ್ ಆಗುತ್ತದೆ. 34 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ಪಡೆದಿದೆ.

ಹೊಸ 'ಟೆಸ್ಸೆರಾಕ್ಟ್' ಎಲೆಕ್ಟ್ರಿಕ್ ಸ್ಕೂಟರ್, ಸವಾರರಿಗೆ ಗರಿಷ್ಠ ಮಟ್ಟದಲ್ಲಿ ರಕ್ಷಣೆಯನ್ನು ಒದಗಿಸಬಲ್ಲದು. ಸುರಕ್ಷತೆಗಾಗಿ ಎಆರ್‌ಎಎಸ್ (ಅಡ್ವಾನ್ಸ್ಡ್ ರೈಡರ್ ಅಸಿಸ್ಟೆನ್ಸ್ ಸಿಸ್ಟಮ್), ಡ್ಯಾಶ್‌ಕ್ಯಾಮ್, ಡುಯಲ್ ಚಾನೆಲ್ ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್, ಡೈನಾಮಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ಫ್ರಂಟ್ & ರೇರ್ ಡಿಸ್ಕ್ ಬ್ರೇಕ್‌ಗಳನ್ನು ತನ್ನದಾಗಿಸಿಕೊಂಡಿದೆ.
ಅಲ್ಟ್ರಾವೈಲೆಟ್ ಟೆಸ್ಸೆರಾಕ್ಟ್ ಪ್ರತಿಸ್ಪರ್ಧಿ ಎಥರ್ ರಿಜ್ಟಾ ವಿಶೇಷತೆಗಳೇನು?
ಇದು ರೂ.1.05 ಲಕ್ಷದಿಂದ ರೂ.1.30 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ರಿಜ್ಟಾ ಎಸ್ ಮತ್ತು ರಿಜ್ಟಾ ಝಡ್ ಎಂಬ ರೂಪಾಂತರಗಳೊಂದಿಗೂ ಸಿಗುತ್ತದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಡೆಕ್ಕನ್ ಗ್ರೇ, ಸಿಯಾಚಿನ್ ವೈಟ್, ಪ್ಯಾಂಗಾಂಗ್ ಬ್ಲೂ ಮತ್ತು ಟೆರಾಕೋಟಾ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 150 ಎಂಎಂ ಗ್ರೌಂಡ್ ಕ್ಲಿಯರೆನ್ಸ್ & 1,285 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ನೂತನ 'ರಿಜ್ಟಾ' ಇ-ಸ್ಕೂಟರ್ 2.9 ಮತ್ತು 3.7 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 123 ರಿಂದ 160 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಎಲ್‌ಸಿಡಿ ಸ್ಕ್ರೀನ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಹೆಚ್ಚಿನ ಲಗೇಜ್ ಸಾಗಿಸಲು 34 ಲೀಟರ್‌ನಷ್ಟು ಅಂಡರ್ ಸೀಟ್ ಸ್ಟೋರೇಜ್‌ನ್ನು ಹೊಂದಿದೆ. ಸವಾರರ ರಕ್ಷಣೆಗಾಗಿ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಪಡೆದಿದೆ.


Click it and Unblock the Notifications








