ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ದೇಶಿಯ ಮಾರುಕಟ್ಟೆಯಲ್ಲಿನ ಕಾರು ಮಾರಾಟದಲ್ಲಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಕಾರು ಉತ್ಪನ್ನಗಳ ಬಿಡುಗಡೆಗೆ ಸಿದ್ದವಾಗಿದ್ದು, ಗ್ರಾಹಕರ ಬೇಡಿಕೆಯೆಂತೆ ಹೊಸ ವಿನ್ಯಾಸದ ಮಧ್ಯಮ ಕ್ರಮಾಂಕದ ಎಸ್‌ಯುವಿ ಮಾದರಿಗಳ ಜೊತೆಗೆ ಎಂಪಿವಿ ಮತ್ತು ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಎಂಟ್ರಿ ಲೆವಲ್ ಕಾರು ಮಾದರಿಗಳಿಂದ ಮಧ್ಯಮ ಗಾತ್ರದ ಎಸ್‌ಯುವಿ ಮಾದರಿಗಳ ತನಕ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿರುವ ಹ್ಯುಂಡೈ ಕಂಪನಿಯು ಎಸ್‌ಯುವಿ ಮತ್ತು ಎಂಪಿವಿ ಶ್ರೇಣಿಯನ್ನು ವಿಸ್ತರಿಸುವ ಯೋಜನೆಯಲ್ಲಿದ್ದು, ಮಾಹಿತಿಗಳ ಪ್ರಕಾರ ಹ್ಯುಂಡೈ ಕಂಪನಿಯು ಎಂಜಿ ಹೆಕ್ಟರ್ ಪ್ಲಸ್ ಮತ್ತು ಟಾಟಾ ಗ್ರಾವಿಟಾಸ್ ಕಾರುಗಳಿಗೆ ಪೈಪೋಟಿ ಕ್ರೆಟಾ 7 ಸೀಟರ್ ಮತ್ತು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಪಾಲಿಸೆಡ್ ಎಸ್‌ಯುವಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಹಾಗೆಯೇ ಎಂಪಿವಿ ಮಾದರಿಗಳ ಮಾರಾಟದಲ್ಲೂ ಪ್ರವೇಶ ಪಡೆಯುತ್ತಿರುವ ಹ್ಯುಂಡೈ ಕಂಪನಿಯು ಪ್ರೀಮಿಯಂ ಮಾದರಿಯ ಎಂಪಿವಿ ಮತ್ತು ಎಸ್‌ಯುವಿ ಕಾರುಗಳ ಬಿಡುಗಡೆಗಾಗಿ ಈಗಾಗಲೇ ಹಲವು ಸುತ್ತಿನ ಮಾರುಕಟ್ಟೆ ಅಧ್ಯಯನ ನಡೆಸಿದೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಮಾಹಿತಿಗಳ ಪ್ರಕಾರ, ಐಷಾರಾಮಿ ಎಸ್‌ಯುವಿ ಮಾದರಿಯಾಗಿ ಪಾಲಿಸೆಡ್ ಮತ್ತು ಎಂಪಿವಿ ಆವೃತ್ತಿಯಾಗಿ ಸ್ಟಾರೆಕ್ಸ್ ಕಾರುಗಳನ್ನು ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಪಾಲಿಸೆಡ್ ಕಾರು ಟೊಯೊಟಾ ಫಾರ್ಚೂನರ್ ಮತ್ತು ಫೋರ್ಡ್ ಎಂಡೀವರ್ ಕಾರುಗಳಿಗೆ ಪೈಪೋಟಿ ನೀಡಲಿದ್ದರೆ ಸ್ಟಾರೆಕ್ಸ್ ಎಂಪಿವಿ ಕಾರು ಟೊಯೊಟಾ ಇನೋವಾ ಕ್ರಿಸ್ಟಾ ಮತ್ತು ಕಿಯಾ ಕಾರ್ನಿವಾಲ್ ಕಾರುಗಳ ನಡುವಿನ ಸ್ಥಾನದೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿವೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಹಾಗೆಯೇ ಕ್ರೆಟಾ ಕಾರು ಮಾದರಿಯಲ್ಲೇ ಬಿಡುಗಡೆ ಮಾಡಲಾಗುತ್ತಿರುವ 7 ಸೀಟರ್ ಮಾದರಿಯು ಕೂಡಾ ಎಸ್‌ಯುವಿ ಕಾರು ಮಾದರಿಗಳಿಗೆ ಮಾತ್ರವಲ್ಲ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದ್ದು, 5 ಸೀಟರ್ ಮಾದರಿಗಿಂತ 7 ಸೀಟರ್ ಮಾದರಿಯು ಹೆಚ್ಚುವರಿ ರೂ.1 ಲಕ್ಷದಿಂದ ರೂ.2 ಲಕ್ಷದಷ್ಟು ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

2+3+2 ಆಸನ ಸೌಲಭ್ಯ ಪಡೆದುಕೊಳ್ಳಲಿರುವ 7 ಸೀಟರ್ ಕ್ರೆಟಾ ಮಾದರಿಯು ಸಾಮಾನ್ಯ ಕಾರಿನಲ್ಲಿರುವಂತೆಯೇ ಎಂಜಿನ್ ಆಯ್ಕೆ ಹೊಂದಿಲಿದ್ದು, ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿರಲಿದೆ. ಮುಂಬರುವ 2021ರ ಆರಂಭದಲ್ಲಿ ಹೊಸ ಕಾರು ಬಿಡುಗಡೆಯಾಗಲಿದ್ದು, ದುಬಾರಿ ಬೆಲೆಯ ಎಂಪಿವಿ ಕಾರುಗಳಿಗೆ ಹೊಸ ಕಾರು ಪೈಪೋಟಿ ನೀಡಲಿದೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಇದಲ್ಲದೆ ಎಂಪಿವಿ ಕಾರು ಮಾರಾಟ ವಿಭಾಗದಲ್ಲಿ ಸದ್ಯ ಭಾರೀ ಜನಪ್ರಿಯತೆ ಹೊಂದಿರುವ ಮಾರುತಿ ಸುಜುಕಿ ಎರ್ಟಿಗಾ ಮತ್ತು ಟೊಯೊಟಾ ಇನೋವಾ ಕ್ರಿಸ್ಟಾ ನಡುವಿನ ಬೆಲೆ ಅಂತರವನ್ನು ಸರಿದೂಗಿಸಬಹುದಾದ ಎಂಪಿವಿ ಮಾದರಿಯೊಂದರ ಕಾನ್ಸೆಪ್ಟ್ ಮಾದರಿಯನ್ನು ಸಹ ಈಗಾಗಲೇ ಸಿದ್ದಪಡಿಸಲಾಗಿದ್ದು, ಇದು ಎರ್ಟಿಗಾಗಿಂತಲೂ ಹೆಚ್ಚು ವೀಲ್ಹ್‌ಬೆಸ್ ಹೊಂದಿರಲಿದ್ದು, ಬೆಲೆಯಲ್ಲಿ ಇನೋವಾ ಕ್ರಿಸ್ಟಾಗಿಂತಲೂ ಆಕರ್ಷಕವಾಗಿರಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಹ್ಯುಂಡೈ ಕಂಪನಿಯು ಸಾಮಾನ್ಯ ಮಾದರಿಯ ಕಾರು ಮಾದರಿಗಳ ಜೊತೆಜೊತೆಗೆ ಎಲೆಕ್ಟ್ರಿಕ್ ಕಾರು ಮಾದರಿಗಳ ಮೇಲೂ ಅಷ್ಟೇ ಪ್ರಮಾಣದ ಹೂಡಿಕೆ ಮಾಡುತ್ತಿದ್ದು, ಭಾರತದಲ್ಲಿ ಈಗಾಗಲೇ ಕೊನಾ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದೆ.

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಕೊನಾ ಇವಿ ಕಾರು ಹೆಚ್ಚಿನ ಮೈಲೇಜ್ ಮತ್ತು ಪ್ರೀಮಿಯಂ ಫೀಚರ್ಸ್ ಹೊಂದಿರುವ ಕಾರಣ ತುಸು ದುಬಾರಿ ಎನ್ನಿಸಲಿದ್ದು, ದೇಶಿಯ ಮಾರುಕಟ್ಟೆಯಲ್ಲಿ ದುಬಾರಿ ಬೆಲೆ ವಾಹನಗಳಿಂತ ಬಜೆಟ್ ಬೆಲೆಯಲ್ಲಿ ಉತ್ತಮ ಮೈಲೇಜ್ ಹೊಂದಿರುವ ಇವಿ ವಾಹನಗಳಿಗೆ ಹೆಚ್ಚು ಬೇಡಿಕೆ ಹರಿದುಬರುತ್ತಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಭಾರತದಲ್ಲಿ ಹ್ಯುಂಡೈ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳಿವು..

ಇದರಿಂದಾಗಿ ಹ್ಯುಂಡೈ ಕಂಪನಿಯು ಹೊಸ ಇವಿ ಕಾರುಗಳನ್ನು ಎಲ್ಲಾ ವರ್ಗದ ಗ್ರಾಹಕರನ್ನು ಗಮದಲ್ಲಿಟ್ಟುಕೊಂಡು ವಿವಿಧ ಮಾದರಿಯ ಇವಿ ಕಾರುಗಳನ್ನು ಬಿಡುಗಡೆ ಮಾಡಲು ಸಿದ್ದವಾಗುತ್ತಿದ್ದು, 2022ರ ವೇಳೆಗೆ ಎಎಕ್ಸ್1 ಕಾನ್ಸೆಪ್ಟ್ ಮಾದರಿ ಸೇರಿದಂತೆ ವಿವಿಧ ಕಾರು ಮಾದರಿಯ ಎಲೆಕ್ಟ್ರಿಕ್ ವರ್ಷನ್‌ಗಳನ್ನು ಬಿಡುಗಡೆ ಮಾಡಲಿದೆ.

Most Read Articles

Kannada
English summary
Upcoming Hyundai Cars In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X