Sanjay Ambekar       May 02, 2024

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಬಿಡುಗಡೆ: ವಿಶೇಷತೆಗಳೇನು?

ಬೆಲೆ 

ಈ ಕಾರು ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 

ರೂಪಾಂತರಗಳು

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಮಾದರಿಯು ಎಂಎಕ್ಸ್, ಎಎಕ್ಸ್5 ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. 

ಆಸನ ಆಯ್ಕೆ

ಈ ಕಾರು 5 - ಆಸನಗಳೊಂದಿಗೂ ದೊರೆಯುತ್ತದೆ. 

ಎಂಜಿನ್

1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಟಿಜಿಡಿಐ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಲಭ್ಯವಿದೆ. 

ಗೇರ್ ಬಾಕ್ಸ್

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/  6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. 

ಮೈಲೇಜ್

ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ  17.96 ರಿಂದ 21.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 

ವೈಶಿಷ್ಟ್ಯಗಳು

ಈ ಕಾರು 10.25-ಇಂಚಿನ ಡುಯಲ್ ಡಿಸ್ಪ್ಲೇ,  ವೈರ್‌ಲೆಸ್ ಫೋನ್ ಚಾರ್ಜರ್, ಕನೆಕ್ಟೆಡ್ ಕಾರ್ ಟೆಕ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಸುರಕ್ಷತಾ ವೈಶಿಷ್ಟ್ಯಗಳು

ಇದು 6 ಏರ್‌ಬ್ಯಾಗ್‌, TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.