Sanjay Ambekar       Apr 25, 2024

1 ವರ್ಷದಲ್ಲಿಯೇ ದಾಖಲೆ ನಿರ್ಮಿಸಿದ ಫ್ರಾಂಕ್ಸ್ ಕಾರು

ಏನದು?

ಮಾರುತಿ ಸುಜುಕಿ ಕಂಪನಿಯು 1 ವರ್ಷದಲ್ಲಿಯೇ 134,735 ಫ್ರಾಂಕ್ಸ್ ಎಸ್‌ಯುವಿಗಳನ್ನು ಮಾರಾಟಗೊಳಿಸಿ ದಾಖಲೆ ನಿರ್ಮಿಸಿದೆ. 

ಬೆಲೆ 

ಈ ಕಾರು ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ.

ರೂಪಾಂತರಗಳು

ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಸಿಗ್ಮಾ, ಡೆಲ್ಟಾ, ಡೆಲ್ಟಾ ಪ್ಲಸ್, ಜಿಟಾ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ.

ಬಣ್ಣಗಳು

ಈ ಕಾರು ನೆಕ್ಸಾ ಬ್ಲೂ, ಅರ್ಥನ್ ಬ್ರೌನ್, ಆರ್ಕ್ಟಿಕ್ ವೈಟ್, ಒಪ್ಯುಲೆಂಟ್ ರೆಡ್ ಒಳಗೊಂಡಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿದೆ.

ಎಂಜಿನ್

ಮಾರುತಿ ಸುಜುಕಿ ಫ್ರಾಂಕ್ಸ್ ಕಾರು ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್ ನೊಂದಿಗೆ ದೊರೆಯುತ್ತದೆ.

ಗೇರ್ ಬಾಕ್ಸ್

ಈ ಕಾರು ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಅಥವಾ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್  ಅನ್ನು ಹೊಂದಿದೆ.

ಮೈಲೇಜ್

ಮಾರುತಿ ಸುಜುಕಿ ಫ್ರಾಂಕ್ಸ್ 20.1 ರಿಂದ 28.51 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು

ಈ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಸುರಕ್ಷತಾ ವೈಶಿಷ್ಟ್ಯಗಳು

ಮಾರುತಿ ಸುಜುಕಿ ಫ್ರಾಂಕ್ಸ್  ಸುರಕ್ಷೆಗಾಗಿ 6-ಏರ್‌ಬ್ಯಾಗ್‌ ಪಡೆದಿದೆ.