Sanjay Ambekar       May 13, 2024

ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನಿಂದ ಐತಿಹಾಸಿಕ ಮೈಲಿಗಲ್ಲು ನಿರ್ಮಾಣ  

ಏನದು?

ಮಾರುತಿ ಸುಜುಕಿ ಕಂಪನಿಯು ಆರ್ಡರ್ ತೆಗೆದುಕೊಳ್ಳುವುದನ್ನು ಶುರು ಮಾಡಿದ 8 ದಿನಗಳಲ್ಲಿ 10,000ಕ್ಕೂ ಹೆಚ್ಚಿನ ಗ್ರಾಹಕರು ಈ ಕಾರಿಗಾಗಿ ಬುಕ್ಕಿಂಗ್ ಮಾಡಿದ್ದಾರೆ.

ಬೆಲೆ

ಈ ಕಾರು ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 

ರೂಪಾಂತರಗಳು

ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ರೂಪಾಂತರಗಳೊಂದಿಗೂ ಲಭ್ಯವಿದೆ. 

ಬಣ್ಣಗಳು 

ಈ ಕಾರು ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. 

ಎಂಜಿನ್

ಇದು 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ. 

ಗೇರ್ ಬಾಕ್ಸ್

ಈ ಕಾರು 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ.

ಮೈಲೇಜ್

ಮಾರುತಿ ಸುಜುಕಿ ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ಕೊಡುತ್ತದೆ.

ವೈಶಿಷ್ಟ್ಯಗಳು

ಈ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 

ಸುರಕ್ಷತಾ ವೈಶಿಷ್ಟ್ಯಗಳು

ಸ್ವಿಫ್ಟ್‌ ಹ್ಯಾಚ್‌ಬ್ಯಾಕ್‌ 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.