Arun Teja P       May 11, 2024

ಹೊಸ 2024 ಮಾರುತಿ ಸ್ವಿಫ್ಟ್ ಆನ್-ರೋಡ್ ಬೆಲೆ, EMI ಎಷ್ಟು?

ಹೊಸ 2024 ಮಾರುತಿ ಸ್ವಿಫ್ಟ್ ಕಾರನ್ನು ಖರೀದಿಸಲು ನೀವು ಪ್ಲ್ಯಾನ್ ಮಾಡಿದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ವಿವರಗಳು.

ಬೆಂಗಳೂರಿನಲ್ಲಿ ಬೇಸ್ ವೇರಿಯೆಂಟ್ 'ಎಲ್ಎಕ್ಸ್ಐ' ರೂ.7.86 ಲಕ್ಷ, 'ವಿಎಕ್ಸ್ಐ' ರೂ.8.82 ಲಕ್ಷ, 'ಝಡ್ಎಕ್ಸ್ಐ' ರೂ.10.02 ಲಕ್ಷ ಬೆಲೆಯಿದೆ.

ಹೊಸ 2024 ಮಾರುತಿ ಸ್ವಿಫ್ಟ್ ಟಾಪ್ ಎಂಡ್ ಮಾಡೆಲ್ 'ಝಡ್ಎಕ್ಸ್ಐ ಪ್ಲಸ್' ಎಎಂಟಿ ರೂ.11.63 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. 

ನೀವು ಈ ಕಾರನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ, ಖರೀದಿಸಿದರೆ ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ತಿಂಗಳಿಗೆ ರೂ.12,404 ಇಎಂಐ (EMI) ಕಟ್ಟಬೇಕು.

ಈ ಕಾರು ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಹೊಂದಿದೆ.

ಹೊಸ ಸ್ವಿಫ್ಟ್' 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 80 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 112 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತೆ.

ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್ ಅಥವಾ ಆಟೋಮೆಟಿಕ್ ಗೇರ್‌ ಬಾಕ್ಸ್‌ನೊಂದಿಗೆ ಲಭ್ಯವಿದ್ದು, 24.8 - 25.72 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಈ ಕಾರಿನಲ್ಲಿ 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್‌, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್‌ ನೀಡಲಾಗಿದೆ.

ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್ ಟ್ಯೂನ್ಡ್ ಸೌಂಡ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್, ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.