ಹೊಸ ಮಾರುತಿ ಸುಜುಕಿ ಸ್ವಿಫ್ಟ್ ಬಿಡುಗಡೆ
ಈ ಕಾರು ರೂ.ರೂ.6.49 ಲಕ್ಷದಿಂದ ರೂ.9.65 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಸ್ವಿಫ್ಟ್ ಹ್ಯಾಚ್‌ಬ್ಯಾಕ್ ಎಲ್ಎಕ್ಸ್ಐ, ವಿಎಕ್ಸ್ಐ, ವಿಎಕ್ಸ್ಐ (ಒ), ಝಡ್ಎಕ್ಸ್ಐ, ಝಡ್ಎಕ್ಸ್ಐ ಪ್ಲಸ್ ರೂಪಾಂತರಗಳ ಆಯ್ಕೆಯಲ್ಲಿ ಲಭ್ಯವಿದೆ.
ಈ ಕಾರು ಸಿಜ್ಲಿಂಗ್ ರೆಡ್, ಪರ್ಲ್ ಆರ್ಕ್ಟಿಕ್ ವೈಟ್, ಮ್ಯಾಗ್ಮಾ ಗ್ರೇ, ನಾವೆಲ್ ಆರೆಂಜ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ.
ಸ್ವಿಫ್ಟ್ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಫಾಗ್ ಲೈಟ್‌ಗಳನ್ನು ಹೊಂದಿದೆ.
ಇದು 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಒಳಗೊಂಡಿದೆ.
ಈ ಕಾರು 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯನ್ನು ಪಡೆದಿದೆ.
ಮಾರುತಿ ಸುಜುಕಿ ಸ್ವಿಫ್ಟ್ ಹ್ಯಾಚ್‌ಬ್ಯಾಕ್ 24.8 ರಿಂದ 25.72 ಕೆಎಂಪಿಎಲ್ ವರೆಗೆ ಮೈಲೇಜ್ ನೀಡುತ್ತದೆ.
ಈ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಸ್ವಿಫ್ಟ್ ಹ್ಯಾಚ್‌ಬ್ಯಾಕ್ 6 ಏರ್‌ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.