Sanjay Ambekar       Apr 29, 2024

 ಟೊಯೊಟಾ ಟೈಸರ್ ಕಾರಿನ ಕುರಿತು ಬಿಗ್ ಅಪ್ಡೇಟ್ 

ಏನದು?

ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಕಾರು, ವಿವಿಧ ರಾಜ್ಯಗಳಿಗೆ ಸೇರಿದ ಡೀಲರ್‌ಶಿಪ್‌ ಗಳನ್ನು ತಲುಪುವುದಕ್ಕೆ ಶುರುವಾಗಿದೆ. 

ಬೆಲೆ 

ಈ ಕಾರು ರೂ7.74 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.

ರೂಪಾಂತರಗಳು

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ ಎಸ್‌ಯುವಿ ಇ, ಎಸ್, ಎಸ್ ಪ್ಲಸ್, ಜಿ ಸೇರಿದಂತೆ ವಿವಿಧ ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ.

ಬಣ್ಣಗಳು

ಈ ಕಾರು ಲ್ಯೂಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೆ ಲಭ್ಯವಿದೆ. 

ಎಂಜಿನ್

ಇದು 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ.

ಗೇರ್ ಬಾಕ್ಸ್

ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ 6-ಸ್ಪೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ.

ಆಸನ ಆಯ್ಕೆ

ಈ ಕಾರಿನಲ್ಲಿ  5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 

ವೈಶಿಷ್ಟ್ಯಗಳು

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. 

ಸುರಕ್ಷತಾ ವೈಶಿಷ್ಟ್ಯಗಳು

ಈ ಕಾರು 6 ಏರ್‌ಬ್ಯಾಗ್‌ ಒಳಗೊಂಡಂತೆ ವಿವಿಧ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ.