ಈ ಜನಪ್ರಿಯ ಬೈಕಿನ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
ಟ್ರಯಂಫ್ ಸ್ಪೀಡ್ 400 ಬೈಕಿನ ಬೆಲೆಯು ಈಗ ಸರಿಸುಮಾರು ರೂ. 1,500 ಹೆಚ್ಚಾಗಿದೆ.
ಈ ಬೈಕ್ 'ಟಿಯರ್-ಡ್ರಾಪ್' ಆಕಾರದ ಫ್ಯೂಯಲ್ ಟ್ಯಾಂಕ್ ಮತ್ತು ಎಲ್ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್ಇಡಿ ಟರ್ನ್ ಇಂಡಿಕೇಟರ್‌ಗಳನ್ನು ಹೊಂದಿದೆ.
ಈ ಬೈಕಿನಲ್ಲಿ 398.15cc, ಲಿಕ್ವಿಡ್-ಕೂಲ್ಡ್, 4-ವಾಲ್ವ್, DOHC, ಓವರ್‌ಸ್ಕ್ವೇರ್ ಎಂಜಿನ್ ಅನ್ನು ಹೊಂದಿದೆ.
ಈ ಎಂಜಿನ್ 8,000rpm ನಲ್ಲಿ 39.5bhp ಮತ್ತು 6,500rpm ನಲ್ಲಿ 37.5Nm ಟಾರ್ಕ್ ಉತ್ಪಾದಿಸುತ್ತದೆ.
ಈ ಎಂಜಿನ್ ನೊಂದಿಗೆ 6-ಸ್ಪೀಡ್ ಗೇರ್‌ಬಾಕ್ಸ್ ಅನ್ನು ಸಹ ಹೊಂದಿದೆ.
ಮುಂಭಾಗದಲ್ಲಿ 43mm USD ಫೋರ್ಕ್‌ಗಳು ಮತ್ತು ಹಿಂಭಾಗದಲ್ಲಿ ಗ್ಯಾಸ್-ಚಾರ್ಜ್ಡ್ ಮೊನೊಶಾಕ್‌ನಿಂದ ಒಳಗೊಂಡಿದೆ.
ಮುಂಭಾಗದಲ್ಲಿ 300 ಎಂಎಂ ಡಿಸ್ಕ್ ಬ್ರೇಕ್ ಮತ್ತು ಹಿಂಭಾಗದಲ್ಲಿ 230 ಎಂಎಂ ಡಿಸ್ಕ್ ಬ್ರೇಕ್ ಅನ್ನು ಹೊಂದಿದೆ.